Home » ಮಳೆಗಾಲ ಎದುರಿಸಲು ಶಾಸಕ ಕೊಡ್ಗಿ ಸೂಚನೆ
 

ಮಳೆಗಾಲ ಎದುರಿಸಲು ಶಾಸಕ ಕೊಡ್ಗಿ ಸೂಚನೆ

by Kundapur Xpress
Spread the love

ಕುಂದಾಪುರ : ಮಳೆಗಾಲ ಆರಂಭವಾಗಿದ್ದು ಮಳೆಗಾಲ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶಗೊಂಡಿದ್ದು ಪ್ರಸ್ತಕ ಸಾಲಿನಲ್ಲಿ ಗಾಳಿ ಮಳೆ ಜೋರಾಗಿ ಸುರಿಯುವ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿರುವ ಹಿನ್ನಲೆಯಲ್ಲಿ ಮುಂಗಾರು ಮಳೆಯಿಂದಾಗಿ ಉಂಟಾಗುವ ಹಾನಿ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವಂತೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಮೆಸ್ಕಾಂ ಇಲಾಖೆ, ಪುರಸಭೆ ಕುಂದಾಪುರ, ವಲಯ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.

ನಿರಂತರ ವಿದ್ಯುತ್ ಪೂರೈಕೆ, ವಿದ್ಯುತ್ ಅವಘಡ ಮತ್ತು ಹಾನಿ ತಪ್ಪಿಸಲು ರಸ್ತೆಯ ಇಕ್ಕಲುಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಹಾಗೂ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಹಾಗೂ ಅಪಾಯಕಾರಿ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವುದು, ಮಳೆ ನೀರು ಹರಿಯುವ ಚರಂಡಿಗಳಲ್ಲಿ ಹೂಳು ತುಂಬಿದ ರಸ್ತೆಯ ಮೇಲೆ ನೀರು ಹರಿದು ಜನ ವಾಹನ ಸಂಚಾರಕ್ಕೆ ಅನಾನುಕೂಲವಾಗಿರುತ್ತದೆ.

ಪುರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ನೀರು ಹರಿಯುವ ಚರಂಡಿಗಳಲ್ಲಿರುವ ಹೂಳುಗಳನ್ನು ತೆರುವುಗೊಳಿಸಿ ಸರಾಗವಾಗಿ ಹರಿಯುವಂತೆ ಮಾಡಲು ಕ್ರಮ ಕೈಗೊಳ್ಳುವುದು, ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಮುಖ್ಯಧಿಕಾರಿಗಳಿಗೆ ಪತ್ರ ಮುಖೇನ ಸೂಚಿಸಿದ್ದಾರೆ.

ಅಪಾಯಕಾರಿ ಮರಗಳಿಂದ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಜೀವ ಹಾನಿಯಾಗದಂತೆ ಎಚ್ಚರ ಬಯಸುವುದು ಅತ್ಯಗತ್ಯವಾಗಿರುತ್ತದೆ. ನಿಟ್ಟಿನಲ್ಲಿ ರಸ್ತೆಯ ಇಕ್ಕಲಗಳಲ್ಲಿರುವ ಅಪಾಯಕಾರಿ ಮರ ಹಾಗೂ ಗೆಲ್ಲುಗಳನ್ನು ತೆರವುಗೊಳಿಸುವುದು ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಲಯ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಷ್ಟೀಯ ಹೆದ್ದಾರಿಗಳಲ್ಲಿ ಡಿವೈಡರ್ ಅನ್ನು ಸಮರ್ಪಕವಾಗಿ ಅಳವಡಿಸಿ ಪ್ರತಿಫಲಕಗಳನ್ನು ಸಾರ್ವಜನಿಕರಿಗೆ ಹಾಗೂ ಸಂಚಾರಿಗಳಿಗೆ ತೋರುವ ಹಾಗೆ ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ತಿಳಿಸಿದ್ದಾರೆ.

   

Related Articles

error: Content is protected !!