ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್ ಪಿಪಿ (ಸರ್ಕಾರಿ ವಿಶೇಷ ಅಭಿಯೋಜಕ) ಅವರನ್ನು ಬದಲಾವಣೆ ಮಾಡಲು ಯಾವ ಸಚಿವರು, ಶಾಸಕರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
‘ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಸಚಿವರು ಒತ್ತಡ ಹಾಕುತ್ತಿದ್ದಾರೆಯೇ’ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಇದಕ್ಕೆ ಉತ್ತರಿಸಿದ ಅವರು, ‘ಎಸ್ಪಿಸಿ ಬದಲಾಯಿಸಲು ಯಾವ ಸಚಿವರು, ಶಾಸಕರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಿದರೆ ಕೇಳೋದು ಇಲ್ಲ’ ಎಂದರು.
ಎಸ್ಪಿಸಿ ಬದಲಾವಣೆ ಮಾಡಲಾಗುವುದು ಎಂದು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಹೇಳಿದರು.