ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಜಂಟಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ ಆಚರಿಸಲಾಯಿತು.ಶಾಲಾ ಯೋಗ ಶಿಕ್ಷಕಿ ಕು|ಅನ್ವಿತಾ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿದರು.ಜನತಾ ಪದವಿಪೂರ್ವ ಕಾಲೇಜಿನ ಅಂತರರಾಷ್ಟ್ರೀಯ ಮಟ್ಟದ ಯೋಗ ಪ್ರತಿಭೆಗಳಾದ ಕು|ಧನ್ವಿ ಮರವಂತೆ,ಕು|ತನ್ವಿತಾ,ಕು|ನಿರೀಕ್ಷಾ ಇವರಿಂದ ಹಾಗೂ ಶಾಲಾ ಆಯ್ದ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.
ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ,ಜನತಾ ಸಮೂಹ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.