Home » ಶಾಸಕ ಸಂಸದರಿಂದ ಯೋಗಾಸನ
 

ಶಾಸಕ ಸಂಸದರಿಂದ ಯೋಗಾಸನ

by Kundapur Xpress
Spread the love

ಕೊಲ್ಲೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಂಸದರಾದ ಬಿ.ವೈ.ರಾಘವೇಂದ್ರ ಹಾಗೂ ಶಾಸಕರಾದ ಗುರುರಾಜ್ ಗಂಟಿಹೊಳೆ ಕೊಲ್ಲೂರಿನಲ್ಲಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗಾಸನ ಮಾಡಿದರು. 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಸಂಸದರು ಹಾಗೂ ಶಾಸಕರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಯೋಗಾಸನ ಮಾಡಿ ಗಮನ ಸೆಳೆದರು. ನಂತರ ಮಾತನಾಡಿ, ಯೋಗವು ವಿಶ್ವಕ್ಕೆ ಭಾರತವು ನೀಡಿದ ಅತೀ ಮಹತ್ವದ ಕೊಡುಗೆಗಳಲ್ಲಿ ಒಂದಾಗಿದೆ. 170ಕ್ಕೂ ಅಧಿಕ ದೇಶಗಳಲ್ಲಿ ಈಗ ಯೋಗ ದಿನಾಚರಣೆ ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ ಎಂದರು

ಯೋಗದಿಂದ ಆರೋಗ್ಯ ಪೂರ್ಣ ಜೀವನ ನಡೆಸಲು ಸಾಧ್ಯವಿದೆ ಮತ್ತು ಮಾನಸಿಕ ಒತ್ತಡ ನಿವಾರಣೆಗೂ ಯೋಗ ಉತ್ತಮ ಔಷಧ. ಭಾರತೀಯ ವೈದ್ಯ ಪದ್ಧತಿಯಲ್ಲಿ ಯೋಗ ಅತ್ಯಂತ ಮಹತ್ವದ ಸ್ಥಾನ ಹೊಂದಿದೆ. ಎಲ್ಲರೂ ನಿತ್ಯ ಯೋಗ ಮಾಡುವ ಮೂಲಕ ಆರೋಗ್ಯ ಪೂರ್ಣ ಜೀವನ ನಡೆಸಲು ಕರೆ ನೀಡಿದರು.
ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಮುಖರಾದ ವೆಂಕಟೇಶ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು

   

Related Articles

error: Content is protected !!