ಬೆಂಗಳೂರು : ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆ ಯಲ್ಲಿ ಸಾಬೀತಾಗಿದೆ. ಬಿಜೆಪಿ-ಜೆಡಿಎಸ್ ಒಟ್ಟಾಗಿ ರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ.
ರಾಜ್ಯದಲ್ಲಿ 19 ಎನ್ಡಿಎ ಕೂಟದ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ತಿಳಿಸಿದರು
ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್ಡಿಎ ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರ ಅಭಿನಂದನೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಾಕಷ್ಟು ಅಪಪ್ರಚಾರ, ಆಮಿಷಗಳ ನಡುವೆಯೂ ರಾಜ್ಯದ ಜನತೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ. ರಾಜ್ಯದ ನೂತನ ಸಂಸದರಿಗೆ ಅಭಿನಂದನೆಗಳು ಎಂದರು.