ಕೋಟ : ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಅನೌಪಚಾರಿಕ ಕೇಂದ್ರ ಕೋಟ ಇದರ ಅಡಿಯಲ್ಲಿ ನಡೆಯುವ ಚಿತ್ರಕಲಾ, ಯಕ್ಷಗಾನ ನೃತ್ಯ ತರಗತಿಯ ಶೈಕ್ಷಣಿಕ ವರ್ಷದ ಆರಂಭೋತ್ಸವದ ಹಿನ್ನಲ್ಲೆಯಲ್ಲಿ ಸಂಗೀತ ತರಗತಿಯನ್ನು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲ ಸೋಮಶೇಖರ್ ಉದ್ಘಾಟಿಸಿ ಮಕ್ಕಳು ಶಾಲಾ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ತಮ್ಮನ್ನು ತೊಡಗಿಸಿಕೊಂಡಾಗ ಅವರಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆ ಮುಖ್ಯವಾಹಿನಿಗೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್ ವಾರಾಂತ್ಯದಲ್ಲಿ ಮಕ್ಕಳಿಗೆ ಹಲವು ತರಗತಿಗಳು ನಡೆಯುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಸಂಗೀತ ಶಿಕ್ಷಕಿ ಭಾಗೇಶ್ವರಿ ಮಯ್ಯ, ಪೋಷಕರು ಉಪಸ್ಥಿತರಿದ್ದರು.