ಬೆಂಗಳೂರು: ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಸರ್ವಾಧಿಕಾರಿಯಂತೆ ತುರ್ತು ಪರಿಸ್ಥಿತಿ ಹೇರಿದ್ದರು. ಇದರ ಪರಿಣಾಮ ನೂರಾರು ಮಂದಿ ಭಾರತೀಯರ ಸಾವಿಗೆ ಕಾರಣರಾದರು. ಆದರೂ ಈ ಬಗ್ಗೆ ಕಾಂಗ್ರೆಸ್ ಗೆ ಪಶ್ಚಾತಾಪವೇ ಇರಲಿಲ್ಲ. ಈಗಲಾದರೂ ಕಾಂಗ್ರೆಸ್ ತಪ್ಪನ್ನು ಅರಿತು ದೇಶದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಈವರೆಗೆ ದೇಶದ ಜನರಲ್ಲಿ ಕ್ಷಮೆ ಕೇಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು