ಉಡುಪಿ : ಲೋಕಸಭೆಯಲ್ಲಿ ಸೋಮವಾರ ಉಡುಪಿ-ಚಿಕ್ಕಮಗಳೂರಿನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕನ್ನಡದಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದ್ದಕ್ಕೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಭಿನಂದಿಸಿದ್ದಾರೆ. ಭಾನುವಾರ ಸಾಸ್ತಾನದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದ್ದ ಸುರೇಂದ್ರ ಅಡಿಗರು, ಸಂಸತ್ತಿನ ಪ್ರಮಾಣ ವಚನ ಸ್ವೀಕಾರ ಮಾಡುವಾಗ ಕನ್ನಡದ ಶಾಲು ಹಾಕಿಕೊಂಡು, ಕನ್ನಡದಲ್ಲಿ ಪ್ರಮಾಣ ವಚನ ಮಾಡಬೇಕೆಂದು ಕೋರಿಕೆ ಮಂಡಿಸಿದ್ದರು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಕೋಟ ಅವರಿಗೆ ಕನ್ನಡ ಶಾಲು ಹೊದಿಸಿ ಗೌರವಿಸಿದ್ದರು. ಸೋಮವಾರ ಕೋಟ ಅದೇ ಶಾಲು ಹಾಕಿಕೊಂಡು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ