Home » ಸಾಗರದಾಚೆಯೂ ಸರ್ಕಾರಿ ಶಾಲೆ ಅಭಿವೃದ್ಧಿ ಚಿಂತನೆ
 

ಸಾಗರದಾಚೆಯೂ ಸರ್ಕಾರಿ ಶಾಲೆ ಅಭಿವೃದ್ಧಿ ಚಿಂತನೆ

by Kundapur Xpress
Spread the love

ಬೈಂದೂರು : ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸರ್ಕಾರಿ ಶಾಲೆಗಳ ಸೌಲಭ್ಯ ಸುಧಾರಣೆಗೆ ಈಗಾಗಲೇ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಕಾರ್ಯಕ್ರಮದ ಮೂಲಕ ಜಿಲ್ಲೆ, ರಾಜ್ಯ, ಹೊರ ರಾಜ್ಯಗಳ ದಾನಿಗಳು, ಸಂಸ್ಥೆಗಳಿಂದ ಕೊಡುಗೆ ಆಹ್ವಾನಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಸಾಗರದಾಚೆಗೂ ಸಹಾಯಹಸ್ತ ಕೋರುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.
ಇತ್ತೀಚೆಗೆ ದುಬೈ ಪ್ರವಾಸದ ಸಂದರ್ಭದಲ್ಲಿ ಶಾಸಕರಾಗ ಗುರುರಾಜ್ ಗಂಟಿಹೊಳೆ ಅವರು ಅಲ್ಲಿ ನೆಲೆಸಿರುವ ಕ್ಷೇತ್ರದ, ಜಿಲ್ಲೆಯ ಬಂಧುಗಳೊಂದಿಗೆ ಮಾತುಕತೆ ನಡೆಸಿ ಬೈಂದೂರಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಯ ರೂಪುರೇಷೆಗಳನ್ನು ತೆರೆದಿಟ್ಟಿದ್ದಾರೆ.
ಅತ್ಯುತ್ತಮ ಸ್ಪಂದನೆ
ಬೈಂದೂರು ಕ್ಷೇತ್ರದ ಸರ್ಕಾರಿ ಶಾಲೆ ಅಭಿವೃದ್ಧಿಗೆ ಶಾಸಕರು ಹೊಂದಿರುವ ಬದ್ಧತೆ ಹಾಗೂ ಕಾರ್ಯ ನಿಷ್ಠೆಗೆ ದುಬೈ ನಲ್ಲಿ ನೆಲೆಸಿರುವ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿ ಒಂದೇ ಮಾತುಕತೆಯಲ್ಲಿ 7 ಶಾಲೆಗಳನ್ನು ದತ್ತು ಪಡೆಯಲು ಏಳು ಮಂದಿ ದಾನಿಗಳು‌ ಮುಂದೆ ಬಂದಿದ್ದಾರೆ. ಅನೇಕರು ಹಲವು ರೀತಿಯಲ್ಲಿ ಸರ್ಕಾರಿ ಶಾಲೆಗೆ ಕೊಡುಗೆ ನೀಡುವುದಾಗಿ ಮತ್ತು ಅಭಿವೃದ್ಧಿಗೆ ಸಹಕರಿಸುವುದಾಗಿ ಬೆಂಬಲ ಸೂಚಿಸಿದ್ದಾರೆ.

ಇದೇವೇಳೆ ದುಬೈ ಉದ್ಯಮಿಗಳು ಹಾಗೂ ಸಂಘ ಸಂಸ್ಥೆಗಳು ಜತೆಯಾಗಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರನ್ನು ಸನ್ಮಾನಿಸಿದರು.
ಭೇಟಿಯ ವೇಳೆ ವಕ್ವಾಡಿ ಪ್ರವೀಣ್ ಶೆಟ್ಟಿ ಮತ್ತು ಗ್ರೀನ್ ವ್ಯಾಲಿ ಸಂಸ್ಥಾಪಕರಾದ ಮೀರನ್, ರಮೀ ಗ್ರೂಪ್ ಮಾಲಕರಾದ ವರದರಾಜ್ ಶೆಟ್ಟಿ, ಪ್ರಮುಖರಾದ ಗೋಪಾಲ್ ಶೆಟ್ಟಿ, ವೆಂಕಟೇಶ್ ಕಿಣಿ, ಸುರೇಶ್ ಶೆಟ್ಟಿ, ಕೃಷ್ಣ ಪ್ರಸಾದ್ ಅಡ್ಯಂತಾಯ, ಅರುಣ್ ಕುಮಾರ್ ಶಿರೂರು ಮೊದಲಾದವರು ಉಪಸ್ಥಿತರಿದ್ದರು.

   

Related Articles

error: Content is protected !!