ನವದೆಹಲಿ : 18ನೇ ಲೋಕಸಭೆಯ ಸ್ಪೀಕರ್ ಆಯ್ಕೆ ಮಂಗಳವಾರ ನಾಟಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ವಿರುದ್ಧ ಪ್ರತಿಪಕ್ಷಗಳ ಕೂಟವಾಗಿರುವ ‘ಇಂಡಿಯಾ’ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ ಇದರಿಂದಾಗಿ 1976 ರ ಬಳಿಕ ಅಂದರೆ 48 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಲೋಕಸಭೆಯ ಮುಖ್ಯಸ್ಥ ಹುದ್ದೆಗೆ ಬುಧವಾರ ಬೆಳಗ್ಗೆ 11.00 ಗಂಟೆಗೆಚುನಾವಣೆ ನಡೆಯಲಿದೆ.
ಮಿತ್ರ ಪಕ್ಷಗಳಾದ ತೆಲುಗುದೇಶಂ ಹಾಗೂ ಜೆಡಿಯು ಕಣ್ಣಿಟ್ಟಿದ್ದವು ఎందు ಹೇಳಲಾಗಿದ್ದ ಸ್ಪೀಕರ್ ಸ್ಥಾನವನ್ನು ತನ್ನ ಬಳಿಯೇ ಉಳಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, 17ನೇ ಲೋಕಸಭೆಯಲ್ಲಿ ಐದು ವರ್ಷ ಕಾಲ ಸ್ಪೀಕರ್ ಆಗಿದ್ದ ತನ್ನ ಸಂಸದ ಓಂ ಬಿರ್ಲಾ ಅವರನ್ನು ಎನ್ಡಿಎ ಸ್ಪೀಕರ್ ಅಭ್ಯರ್ಥಿ ಎಂದು ಘೋಷಿಸಿದೆ.
ಈ ನಡುವೆ, ಸಂಪ್ರದಾಯದಂತೆ ಆಡಳಿತ ಪಕ್ಷದವರು ಸ್ಪೀಕರ್ ಹುದ್ದೆ ಅಲಂಕರಿಸಿದರೆ ಪ್ರತಿಪಕ್ಷದವರನ್ನು ಉಪಸ್ಪೀಕರ್ ಮಾಡಬೇಕೆಂದು ಇಂಡಿಯಾ ಷರತ್ತು ಇಟ್ಟಿತಾದರೂ, ಅದಕ್ಕೆ ಸರ್ಕಾರ ಒಪ್ಪಿಲ್ಲ. ಹೀಗಾಗಿ ಹಿರಿಯ ಸಂಸದ ಕೋಡಿಕುನ್ನಿಲ್ ಸುರೇಶ್ ಅವರು ‘ಇಂಡಿಯಾ’ ಅಭ್ಯರ್ಥಿಯಾಗಿದ್ದಾರೆ ಇಂದು ಬುಧವಾರ ಬೆಳಗ್ಗೆ 11.00ಕ್ಕೆ ಚೀಟಿ ಮೂಲಕ ಸಂಸದರು ಮತ ಚಲಾವಣೆ ಮಾಡಲಿದ್ದಾರೆ.