ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿ ರೂಪಾಯಿ ಹಣವನ್ನು ಕದ್ದು ಬೇನಾಮಿ ಖಾತೆಗಳಿಗೆ ಅದನ್ನು ವರ್ಗಾಯಿಸಿ ದುರ್ಬಳಕೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಭಾಷಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಎಂದು ಬೊಗಳೆ ಬಿಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈ ಎರಡೂ ಸಮುದಾಯಗಳಿಗೆ ವಂಚಿಸಿ ಘೋರ ಅನ್ಯಾಯವೆಸಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11,000 ಕೋಟಿ ರೂಪಾಯಿಯನ್ನು ಅನ್ಯ ಉದ್ದೇಶಗಳಿಗೆ ಬಳಸಿದ ರಾಜ್ಯ ಕಾಂಗ್ರೆಸ್ ಸರಕಾರ, ಇದೀಗ ಪರಿಶಿಷ್ಟ ಪಂಗಡದ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ನಿರ್ಲಜ್ಜತೆಯಿಂದ ಲಪಟಾಯಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ರಾಜ್ಯ ಸರಕಾರ ಈ ಹಣವನ್ನು ಅನ್ಯ ರಾಜ್ಯಗಳ ಚುನಾವಣೆಗೆ ದುರುಪಯೋಗಪಡಿಸಿಕೊಂಡಿದೆ ಎಂಬ ಮಾಹಿತಿ ಇದೆ ಎಂದರು
ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ತಿಲಾಂಜಲಿಯನ್ನಿತ್ತು, ಜನ ವಿರೋಧಿ, ರೈತ ವಿರೋಧಿ, ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಾ ರಾಜ್ಯದ ಜನತೆಯ ಜೀವನದಲ್ಲಿ ಚೆಲ್ಲಾಟವಾಡುತ್ತಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ರಾಜ್ಯ ಸರಕಾರ ಕೂಡಲೇ ಈ ಹಗರಣದ 187 ಕೋಟಿ ರೂಪಾಯಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಗೆ ವಾಪಾಸು ಜಮಾ ಮಾಡುವ ಮೂಲಕ ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿ ಕೆಲಸಕಾರ್ಯಗಳಿಗೆ ಅದನ್ನು ಬಳಸಬೇಕು. ತಪ್ಪಿದಲ್ಲಿ ಇಡೀ ಸರಕಾರ ನೈತಿಕ ಹೊಣೆ ಹೊತ್ತು ಅಧಿಕಾರದಿಂದ ಕೆಳಗಿಳಿಯಬೇಕು ಮತ್ತು ರಾಜ್ಯ ಸರಕಾರವನ್ನು ಬರ್ಕಾಸ್ತುಗೊಳಿಸಬೇಕು ಎಂದು ಆಗ್ರಹಿಸಿದ ಕಿಶೋರ್ ಕುಮಾರ್ ಕುಂದಾಪುರ, ವಿಪರೀತ ಗಾಳಿ ಮಳೆಯ ನಡುವೆಯೂ ಸುಮಾರು ಒಂದು ಸಾವಿರಕ್ಕೂ ಮಿಕ್ಕಿದ ಬೃಹತ್ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಯಲ್ಲಿ ಭಾಗವಹಿಸಿರುವ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಹುಮ್ಮಸ್ಸು ಕಾಂಗ್ರೆಸ್ ಸರಕಾರದ ವಿರುದ್ಧ ಭುಗಿಲೆದ್ದಿರುವ ಅಸಮಾಧಾನವನ್ನು ಸಾಬೀತುಪಡಿಸಿದೆ ಎಂದರು.
ಲೂಟಿಕೋರ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಯನ್ನು ಕೂಗುತ್ತಾ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ ಮತ್ತು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ! ನವೀನ್ ಕುಮಾರ್ ಸಹಿತ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್ ಪೆರಣಂಕಿಲ, ಕಿರಣ್ ಕುಮಾರ್ ಬೈಲೂರು, ಮಹಾವೀರ ಹೆಗ್ಡೆ, ಸುರೇಶ್ ಶೆಟ್ಟಿ ಕಾಡೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಅನಿತಾ ಶ್ರೀಧರ್, ಉದಯ ಎಸ್. ಕೋಟ್ಯಾನ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರರಾದ ಗೀತಾಂಜಲಿ ಎಮ್. ಸುವರ್ಣ, ವಿಜಯಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿಗಳಾದ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪರಾಜ್ ಶೆಟ್ಟಿ, ಶ್ರೀಕಾಂತ್ ಕಾಮತ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಕುಮಾರದಾಸ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜಾ, ಮಂಡಲ ಅಧ್ಯಕ್ಷರುಗಳಾದ ದೀಪಕ್ ಕುಮಾರ್ ಶೆಟ್ಟಿ ಬೈಂದೂರು, ಸುರೇಶ್ ಶೆಟ್ಟಿ ಗೋಪಾಡಿ, ರಾಜೀವ ಕುಲಾಲ್ ಉಡುಪಿ ಗ್ರಾಮಾಂತರ, ದಿನೇಶ್ ಅಮೀನ್ ಉಡುಪಿ ನಗರ, ಜಿತೇಂದ್ರ ಶೆಟ್ಟಿ ಕಾಪು, ನವೀನ್ ನಾಯಕ್ ಕಾರ್ಕಳ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಸಚಿನ್ ಪೂಜಾರಿ, ಮನೋಜ್ ಕುಮಾರ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಗೋಪಾಲಕೃಷ್ಣ ರಾವ್, ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ನಯನಾ ಗಣೇಶ್, ಶ್ಯಾಮಲಾ ಎಸ್. ಕುಂದರ್, ಶೈಲೇಂದ್ರ ಶೆಟ್ಟಿ, ಸುಮಿತ್ರಾ ಆರ್. ನಾಯಕ್, ವೀಣಾ ಎಸ್. ಶೆಟ್ಟಿ, ಶರತ್ ಶೆಟ್ಟಿ ಉಪ್ಪುಂದ, ಅಕ್ಷಿತ್ ಶೆಟ್ಟಿ ಹೆರ್ಗ, ದಾವೂದ್ ಅಬೂಬಕರ್, ಲಕ್ಷ್ಮೀಶ ಬಂಗೇರ ಸಹಿತ ಮಂಡಲ ಪದಾಧಿಕಾರಿಗಳು, ಮಂಡಲಗಳ ಮೋರ್ಚಾ, ಪ್ರಕೋಷ್ಠ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.