ಹೊಸದಿಲ್ಲಿ : ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ವರ್ಷ ತುಂಬಿದ ಎಲ್ಲರಿಗೂ ಉಚಿತ ವೈದ್ಯಕೀಯ ಸೌಲಭ್ಯ ನೀಡಲಾಗುವುದು ಎಂದು ರಾಷ್ಟ್ರಪತಿ ಬ್ರೌಪದಿ ಮುರ್ಮು ಘೋಷಿಸಿದರು. ಸಂಸತ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಮುರ್ಮು ಅವರು, ಕೇಂದ್ರ ಸರ್ಕಾರದ ಮುಂದಿನ ಕಾರ್ಯಸೂಚಿಗಳ ಬಗ್ಗೆ ವಿವರಣೆ ನೀಡುವ ವೇಳೆ ಆಯುಷ್ಮಾನ್ ಭಾರತ್ ಯೋಜನೆಯಲ್ಲಿನ ಹೊಸ ಸೌಲಭ್ಯದ ಬಗ್ಗೆ ಪ್ರಕಟಿಸಿದರು
ಮುಂದಿನ ದಿನಗಳಲ್ಲಿ 70 ವರ್ಷ ತುಂಬಿದ ಎಲ್ಲ ನಾಗರಿಕರಿಗೂ ಆಯುಷ್ಮಾನ್ ಭಾರತ್ ಅಡಿಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಹಾಗೆಯೇ, ಇನ್ನೂ 25 ಸಾವಿರ ಜನೌಷಧಿ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಅವರು ಘೋಷಿಸಿದರು. ಸದ್ಯ ಆಯುಷ್ಮಾನ್ ಭಾರತ್ ಅಡಿಯಲ್ಲಿ 55 ಕೋಟಿ ಮಂದಿಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ. ಇದೇ ಯೋಜನೆಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಲು ಮುಂದಾಗಿರುವ ಕೇಂದ್ರ ಸರ್ಕಾರ, 70 ವರ್ಷ ತುಂಬಿದ ಎಲ್ಲರಿಗೂ ಈ ಸೌಲಭ್ಯ ಸಿಗುವಂತೆ ಮಾಡಲಿದೆ ಎಂದರು.