ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ನೇತೃತ್ವದ ತಂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಲೋಕಸಭೆ ಚುನಾವಣೆ ಗೆಲುವು ಹಾಗೂ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿತು. ಕೆಲಕಾಲ ಕುಶಲೋಪರಿ ವಿಚಾರಿಸಿತು. ತರುವಾಯ ಸಿದ್ದರಾಮಯ್ಯ ಅವರ ಜತೆಗೆ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ರಾಜ್ಯ ರಾಜಕೀಯದ ವಿಚಾರ ಚರ್ಚಿಸಿದರು ಎನ್ನಲಾಗಿದೆ