ಬೆಂಗಳೂರು : ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿ, ಬುಧವಾರ ಈ ಕುರಿತು ಸುತ್ತೋಲೆ ಹೊರಡಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಆರೋಗ್ಯ ಇಲಾಖೆ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಡೆಂಘೀ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಡೆಂಘೀ ಪಾಸಿಟಿವ್ ಪ್ರಕ ರಣಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದರು.