ಬೆಂಗಳೂರು : ಮೈಸೂರಿನ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸು ವಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಬಲವಾಗಿ ಒತ್ತಾಯಿಸಿದೆ
ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಕೂಡಲೇ ಈ ಮುಡಾ ನಿವೇಶನ ಯೋಜನೆಯನ್ನು ರದ್ದು ಮಾಡಿ ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.