ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆ ಮತ್ತು ಮೈಸೂರಿನ ಮುಡಾ ಅವ್ಯವಹಾರ ಖಂಡಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ತಡೆದು, ಬಂಧಿಸಿ ಬಿಡುಗಡೆಗೊಳಿಸಿದರು.
ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಕುಮಾರಕೃಪಾ ಅತಿಥಿ ಗೃಹದಿಂದ ಕಾವೇರಿವರೆಗೆ ಕಾಲ್ನಡಿಗೆ ಜಾಥಾ ಮೂಲಕ ತೆರಳಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಶಾಸಕರಾದ ವಿ.ಸುನಿಲ್ಕುಮಾರ್, ಸಿ.ಟಿ.ರವಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಅರವಿಂದ ಬೆಲ್ಲದ್ ಸೇರಿದಂತೆ ಬಿಜೆಪಿಯ ಶಾಸಕರು ಮತ್ತು ಮುಖಂಡರು ಭಾಗಿಯಾದರು