Home » ಗುಡ್ಡ ಜರಿದು ಮಹಿಳೆ ಸಾವು
 

ಗುಡ್ಡ ಜರಿದು ಮಹಿಳೆ ಸಾವು

by Kundapur Xpress
Spread the love

ಕುಂದಾಪುರ : ಕಳೆದ ರಾತ್ರಿಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಸಮೀಪದಲ್ಲಿನ ಗುಡ್ಡ ಕುಸಿದು ಮಹಿಳೆಯೋರ್ವರು ಸಾವನ್ನಪ್ಪಿದ ದಾರುಣ ಘಟನೆ ಕೊಲ್ಲೂರು ಸಮೀಪದ ಸೊಸೈಟಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಹಳ್ಳಿಬೇರು ಗ್ರಾಮದ ಪುಟ್ಟ ಎಂಬವರ ಪತ್ನಿ ಅಂಬಾ (48) ಮೃತ ಮಹಿಳೆ

ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುವ ದಾರಿಯಲ್ಲಿ ಸೊಸೈಟಿ ಗುಡ್ಡೆ ಎಂಬಲ್ಲಿ ಇರುವ ಕೊಲ್ಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಅಡಿಗ ಎಂಬವರ ಮನೆಗೆ ಸಮೀಪದ ಹಳ್ಳಿ ಬೇರು ಗ್ರಾಮದ ಪುಟ್ಟ ಎನ್ನುವವರ ಪತ್ನಿ ಅಂಬಾ ಮನೆ ಕೆಲಸಕ್ಕೆ ಬರುತ್ತಿದ್ದರು. ಗುರುವಾರವೂ ಮನೆ ಕೆಲಸ ಮುಗಿಸಿ ಊಟ ಮಾಡಿ ಸಂಜೆ 3.15ರ ವೇಳೆಗೆ ಮನೆಯ ಹಿಂಭಾಗಕ್ಕೆ ತೆರಳಿದ್ದ ವೇಳೆ ಅಂದಾಜು 60 ಅಡಿ ಎತ್ತರದ ಗುಡ್ಡ ಕುಸಿದು ಮಣ್ಣಿನ ರಾಶಿಯಲ್ಲಿ ಹೂತು ಹೋಗಿದ್ದರು

 

ವಿಷಯ ತಿಳಿದ ಕೊಲ್ಲೂರಿನ ಟ್ಯಾಕ್ಸಿ ಹಾಗೂ ಜೀಪ್ ಚಾಲಕ ಅಸೋಸಿಯೇಶನ್ ಸದಸ್ಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದರು. ಸಂಘ ಸದಸ್ಯರ  ಪ್ರಯತ್ನದಿಂದ ಮಹಿಳೆಯನ್ನು ರಕ್ಷಣೆ ಮಾಡಿ, ಚಿಕಿತ್ಸೆಗಾಗಿ ಆಸತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ

ಮೃತ ಮಹಿಳೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರದ ಉಪ ವಿಭಾಗಾಧಿಕಾರಿ ರಶ್ರೀ ಎಸ್.ಆರ್., ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ, ಬೈಂದೂರು ಸರ್ಕಲ್ ಇನ್ ಸೆಕ್ಟರ್ ಸವಿತ್ರತೇಜ್, ತಹಸೀಲ್ದಾರ್‌ ಪ್ರದೀಪ್, ಕೊಲ್ಲೂರು ಠಾಣಾಧಿಕಾರಿ ಜಯಶ್ರೀ ಭೇಟಿ ನೀಡಿದ್ದಾರೆ.

   

Related Articles

error: Content is protected !!