ಕೋಟ :ಸರಕಾರಿ ಶಾಲೆಯಾಗಿದ್ದರೂ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ಬೆಳೆಯುವ ಅವಕಾಶ ಒದಗಿಸುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆ ಇತರೆ ಶಾಲೆಗಳಿಗೆ ಮಾದರಿ ಎಂದು ಹಿರಿಯ ನಿವೃತ್ತ ಶಿಕ್ಷಕಿ ರತ್ನ ನುಡಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡ ಭರತನಾಟ್ಯ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಭರತನಾಟ್ಯ ಗುರು, ವಿದ್ಯುಷಿ ಭಾಗೀರಥಿ.ಎಂ.ರಾವ್ ಭರತನಾಟ್ಯ ಕಲೆಯ ಕುರಿತು ಪರಿಚಯಾತ್ಮಕವಾಗಿ ಮಾತನಾಡಿದರು. ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪಲ್ಲವಿ ಕುಲಾಲ, ಜಿ.ಪಿ.ಎಫ್ ಇಲಾಖೆಯ ನಿವೃತ್ತ ನೌಕರರಾಗಿರುವ ಮಧುಕರ ರಾವ್, ಶಾಲಾ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ.ಬಿ, ರವೀಂದ್ರ ನಾಯಕ್, ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರ ಉಪಸ್ಥಿತರಿದ್ದರು.
ಶಾಲಾ ಸಹ ಶಿಕ್ಷಕ ಅಶೋಕ ತೆಕ್ಕಟ್ಟೆ ಸ್ವಾಗತಿಸಿದರು. ವಿಜಯಾ ಆರ್ ವಂದಿಸಿದರು. ವಿಜಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.