ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳ ಕಡೆಯಿಂದ ಕುಂದಾಪುರದ ಕಡೆಗೆ ಹಣ್ಣು ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ಮಿನಿ ವಾಹನವು ಕುಂದಾಪುರ ಸಮೀಪದ ಮುಳ್ಳಿಕಟ್ಟೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿ ಹೊಡೆದು ರಸ್ತೆ ಮಧ್ಯೆ ಉರುಳಿ ಬಿದ್ದಿದೆ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ರೇನ್ನ ಸಹಾಯದಿಂದ ವಾಹನವನ್ನು ಮೇಲಕ್ಕೆ ಎತ್ತಲಾಯಿತು. ಕಳೆದ ಕೆಲವು ದಿನಗಳ ಹಿಂದೆ ಇದೇ ಜಾಗದಲ್ಲಿ ನಿಯಂತ್ರಣ ತಪ್ಪಿದ ಸಕ್ಕರೆ ಲಾರಿಯೊಂದು ಮಗುಚಿ ಬಿದ್ದಿತ್ತು
ಮುಳ್ಳಿಕಟ್ಟೆ ಜಂಕ್ಷನ್ ನಲ್ಲಿ ನಡೆಯುವ ಅಪಘಾತಕ್ಕೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್ ಗಳೇ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದಾರೆ