ಬೆಂಗಳೂರು : ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ, ಭಾವಮೈದ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಸೇರಿ 6 ಜನರ ವಿರುದ್ದ ಅಧಿಕಾರ ದುರ್ಬಳಕೆ, ವಂಚನೆ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ಸಲ್ಲಿಕೆಯಾಗಿದೆ. ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ರಮೇಶ್ ಎನ್.ಆರ್. ಶನಿವಾರ ಲೋಕಾಯುಕ್ತ ಕಚೇರಿಗೆ ತೆರಳಿ 383 ಪುಟಗಳ ದಾಖಲೆ ಸಲ್ಲಿಸಿ ದೂರು ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರ ದುರುಪಯೋಗ ಪಡಿಸಿಕೊಂಡು ಪತ್ನಿಯ ಹೆಸರಿಗೆ ಮುಡಾದ 14 ನಿವೇಶನಗಳನ್ನು ನೋಂದಣಿ ಮಾಡಿಕೊಂಡ ಸಿದ್ದರಾಮಯ್ಯ ಅವರ ಜತೆ ಮುಡಾ ಮಾಜಿ ಅಧ್ಯಕ್ಷರಾದ ಬಸವೇಗೌಡ, ಎಚ್.ವಿ. ರಾಜೀವ್ ಮತ್ತು ಮುಡಾ ಆಯುಕ್ತರಾಗಿದ್ದ ಡಿ.ಬಿ. ನಟೇಶ್ ವಿರುದ್ಧವೂ ದೂರು ದಾಖಲಿಸಲಾಗಿದೆ ಎಂದರು.