ಕೋಟ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ನೆರೆ ಹಾನಿಗೊಳಗಾದ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಗಿಳಿಯಾರು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ನೆರೆ ಹಾವಳಿಯ ಕುರಿತು ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ವಕೀಲರಾದ ಟಿ.ಮಂಜುನಾಥ್ ಗಿಳಿಯಾರು,ಸುಭಾಷ್ ಶೆಟ್ಟಿ,ಕೃಷಿಕರಾದ ಹಂಡಿಕೆರೆ ರಾಘವೇಂದ್ರ ಶೆಟ್ಟಿ ಮಾಹಿತಿ ನೀಡಿ ಕಳೆದ ಸಾಕಷ್ಟು ವರ್ಷಗಳಿಂದ ಈ ಭಾಗದಲ್ಲಿ ಕೃಷಿ ಕಾಯಕ ನಡೆಸುತ್ತಿದ್ದಾರೆ ಆದರೆ ಇಲ್ಲಿನ ಅಗಲ ಕಿರಿದಾದ ಹೊಳೆ,ಹಾಗೂ ಹೂಳೆತ್ತದೆ ನೆರೆಗೆ ತುತ್ತಾಗುತ್ತಿದ್ದೇವೆ ಇದೇ ರೀತಿ ಮುಂದುವರಿದರೆ ಕೃಷಿ ಕಾಯಕ ನಡೆಸಲು ಸಾಧ್ಯವಿಲ್ಲ ಎಂದು ಸಚಿವರಿಗೆ ಮನವರಿಕೆ ಮಾಡಿದರಲ್ಲದೆ ಶೀಘ್ರದಲ್ಲಿ ಹೊಳೆ ಹೂಳೆತ್ತಲು ಸರಕಾರ ಜಿಲ್ಲಾಡಳಿತಕ್ಕೆ ಮತ್ತು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಬೇಕು,ಶಾಶ್ವತ ಪರಿಹಾರಕ್ಕೆ ಕ್ರಮ ಜರಗಿಸಿ ಎಂದರು.ನೆರೆ ಹಾನಿ ಪರಿಹಾರ ನಿಧಿ ದುಪ್ಪಟ್ಟುಗೊಳಿಸಬೇಕು ಎಂದು ಮನವಿ ಮಾಡಿದರು
ಈ ವೇಳೆ ಸಚಿವರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿ.ಪಂ ಸಿಎಸ್ ಇವರುಗಳಿಗೆ ಹೂಳೆತ್ತುವ ಅಥವಾ ನೆರೆಯಿಂದ ಮುಕ್ತಿಗೊಳಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು. ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ, ಡಿಎಫ್ಒ ಗಣಪತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.