ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಹಾಗೂ ಉಡುಪಿ ತಾಲುಕು ಘಟಕದ ವತಿಯಿಂದ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನವು ಆಗಸ್ಟ್ 27ರಂದು ರಾಜಾಂಗಣದಲ್ಲಿ ನಡೆಯಲಿದೆ.
ಈ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಶ್ರೀ ಮಠದ ವಿದೇಶ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಹಾಗೂ ಪರ್ಯಾಯ ಸಾಂಸ್ಕೃತಿಕ ಸಮಿತಿ ಸಂಚಾಲಕ ರಮೇಶ್ ಭಟ್ ಕೆ. ಉಪಸ್ಥಿತಿಯಲ್ಲಿ ಬಡಗುಮಾಳಿಗೆಯಲ್ಲಿ ಮಂಗಳವಾರ ನಡೆಯಿತು.
ಸಮ್ಮೇಳನ ಕುರಿತು ಮಾಹಿತಿಯನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸುವರ್ಣ ನೀಡಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕರ್ವಾಲ್, ಉಡುಪಿ ತಾಲೂಕು ಅಧ್ಯಕ್ಷ ಮಾಯಾ ಕಾಮತ್, ಉಡುಪಿ ತಾಲೂಕು ಸಂಚಾಲಕ ಪ್ರಭಾ ರಾವ್ ಉಪಸ್ಥಿತರಿದ್ದರು.