ಕೋಟ : ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವ್ಯಾಪ್ತಿಯಲ್ಲಿ ಬರುವ 2024-25ನೇ ಸಾಲಿನಲ್ಲಿ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಅಹ೯ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅವಶ್ಯಕತೆ ಇರುವ ವಿದ್ಯಾರ್ಥಿಗಳು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಇಲ್ಲಿನ ಕಛೇರಿಯ ಸೇವಾ ಕೌಂಟರ್‌ನಲ್ಲಿ ಅರ್ಜಿಗಳನ್ನು ಪಡೆಯಬಹುದು.
ಭತಿ೯ ಮಾಡಿದ ಅರ್ಜಿಗಳನ್ನು ಸಂಬAಧಿಸಿದ ದಾಖಲೆಗಳಾದ ಕಳೆದ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ ಮತ್ತು ಪಡಿತರ ಚೀಟಿಯ ನಕಲು ಪ್ರತಿಗಳೊಂದಿಗೆ ಆಗಸ್ಟ್ ತಿಂಗಳ 25ನೇ ದಿನಾಂಕದ ಒಳಗಾಗಿ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಕಛೇರಿಯ ಸೇವಾ ಕೌಂಟರ್ ನಲ್ಲಿಯೇ ಸಲ್ಲಿಸುವಂತೆ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ಅಧ್ಯಕ್ಷ ಎಂ ಶಿವರಾಮ ಉಡುಪ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 94492 64195 ಸಂಪರ್ಕಿಸಲು ತಿಳಿಸಿದ್ದಾರೆ.