ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧಪೀಡಿತ ಉಕ್ರೇನ್ ರಾಜಧಾನಿ ಕೀವ್ಗೆ ಮುಂದಿನ ತಿಂಗಳು ಭೇಟಿ ನೀಡುವ ಸಾಧ್ಯತೆ ಇದೆ. ರಷ್ಯಾ- ಉಕ್ರೇನ್ ಸಮರ ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಮೋದಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಜು.8 ಹಾಗೂ 9ರಂದು ರಷ್ಯಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಅವರು, ಉಕ್ರೇನ್ ಬಿಕ್ಕಟ್ಟಿಗೆ ಯುದ್ಧ ಭೂಮಿಯಲ್ಲಿ ಪರಿಹಾರ ಕಂಡು ಕೊಳ್ಳಲು ಸಾಧ್ಯವಿಲ್ಲ. ಬಾಂಬ್, ಗನ್ ಹಾಗೂ ಬುಲೆಟ್ಗಳ ನಡುವೆ ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಯಾದಿಮಿರ್ ಪುಟಿನ್ಗೆ ಸ್ಪಷ್ಟವಾಗಿ ಹೇಳಿದ್ದರು.
ಆ.24ರಂದು ಉಕ್ರೇನ್ ರಾಷ್ಟ್ರೀಯ ದಿನ ಇದ್ದು, ಅಂದು ಮೋದಿ ಭೇಟಿ ನೀಡುವುದಕ್ಕೆ ವ್ಯವಸ್ಥೆ ಮಾಡುವ ಸಂಬಂಧ ಎರಡೂ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ