ಕಾಪು : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ 25ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ನಡೆದ “ಪಂಜಿನ ಮೆರವಣಿಗೆ” ಹಾಗೂ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ನಿವೃತ್ತ ಸೈನಿಕರಾದ ವಿನೋದ್ ಕೋಟ್ಯಾನ್ ಮೂಳೂರು, ರಾಜೇಶ್ ಪಾಟ್ಕರ್ ಪಂಜಿಮಾರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕೇಂದ್ರಿಯ ವಿಶ್ವಸ್ಥ ಮಂಡಳಿಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.