ಮೈಸೂರು : ಈ ಬಾರಿಯ ಮುಂಗಾರು ಮಳೆಗೆ ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳು ಜುಲೈ ತಿಂಗಳಲ್ಲಿಯೇ ಭರ್ತಿಯಾ ಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ಸಂಪುಟ ಸಹೋದ್ಯೋಗಿಗಳ ಜೊತೆ ಕಾವೇರಿ ಹಾಗೂ ಕಪಿಲಾ ನದಿಗಳಿಗೆ ಬಾಗಿನ ಅರ್ಪಿಸಿದರು. ಸಾಧಾರಣವಾಗಿ ಆಷಾಢ ಮಾಸದಲ್ಲೇ ಜಲಾಶಯ ಭರ್ತಿಯಾದರೂ ಅಮಾವಾಸ್ಯೆ ಕಳೆದು ಶ್ರಾವಣ ಮಾಸ ಆರಂಭದ ಬಳಿಕವೇ ಬಾಗಿನ ಸಲ್ಲಿಸುವುದು ವಾಡಿಕೆ. ಆದರೆ, ಸಿದ್ದರಾಮಯ್ಯನವರು ಈ ಬಾರಿ ಆಷಾಢದಲ್ಲೇ ಬಾಗಿನ ಅರ್ಪಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು.
ಬೆಳಗ್ಗೆ 11 ಗಂಟೆಯ ಸುಮಾರಿಗೆ ಸಂಪುಟ ಸಹೋದ್ಯೋಗಿಗಳ ಜೊತೆ ಕೆಆರ್ಎಸ್ಗೆ ಆಗಮಿಸಿದ ಸಿಎಂ, ಅಲ್ಲಿಂದ ವಿಶೇಷ ಬಸ್ನಲ್ಲಿ ಡ್ಯಾಂವರೆಗೆ ಆಗಮಿಸಿದರು. ಈ ವೇಳೆ, ಅವರಿಗೆ ಪೂರ್ಣಕುಂಭ ಸ್ವಾಗತನೀಡಲಾಯಿತು. ಬಳಿಕ, ಕಾವೇರಿ ನದಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ, ಅಭಿಜಿನ್ ಮುಹೂರ್ತದಲ್ಲಿನದಿಗೆ ಬಾಗಿನ ಅರ್ಪಿಸಿದರು