Home » ಕಲಾಂ ಜೀವನಾದರ್ಶ ಯುವ ಪೀಳಿಗೆಗೆ ಪ್ರೇರಣಾದಾಯಕ
 

ಕಲಾಂ ಜೀವನಾದರ್ಶ ಯುವ ಪೀಳಿಗೆಗೆ ಪ್ರೇರಣಾದಾಯಕ

ಕಿಶೋರ್ ಕುಮಾರ್ ಕುಂದಾಪುರ

by Kundapur Xpress
Spread the love

‘ಬ್ರಹ್ಮಾವರ : ಭಾರತದ ಪರಮಾಣು ಜನಕ’ ‘ಭಾರತ ರತ್ನ’ ಎಪಿಜೆ ಅಬ್ದುಲ್ ಕಲಾಂ ಅವರ ಸರಳ, ಸಜ್ಜನಿಕೆಯ ಧೀಮಂತ ವ್ಯಕ್ತಿತ್ವ ಎಲ್ಲರಿಗೂ ಮಾದರಿ. ಎಲ್ಲಾ ಧರ್ಮಗಳನ್ನು ಸಮನಾಗಿ ಕಾಣುತ್ತಿದ್ದ ಅಬ್ದುಲ್ ಕಲಾಂ ಅವರು ವಿದ್ಯಾರ್ಥಿಗಳ ಸಹಿತ ಎಲ್ಲ ವರ್ಗಗಳ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದರು. ಸರಳ, ಸಜ್ಜನಿಕೆಗೆ ಹೆಸರುವಾಸಿಯಾಗಿದ್ದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2004ರಲ್ಲಿ ಅಬ್ದುಲ್ ಕಲಾಂ ಅವರ ಹೆಸರನ್ನು ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದರು. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದಾಗ ಹಾಗೂ ಅಧಿಕಾರದಿಂದ ನಿರ್ಗಮಿಸಿದಾಗ ಬಟ್ಟೆ ಬರೆಗಳ ಒಂದು ಬ್ಯಾಗ್ ಮಾತ್ರ ಅವರ ಜೊತೆಗಿತ್ತು. ಶ್ರೇಷ್ಠ ವಿಜ್ಞಾನಿಯಾಗಿ ಪ್ರಖ್ಯಾತರಾಗಿದ್ದರೂ ಕೊಂಚವೂ ಬಿಂಕವಿಲ್ಲದೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕಿ ಅಮರರಾದ ಎಪಿಜೆ ಅಬ್ದುಲ್ ಕಲಾಂ ಅವರ ಜೀವನಾದರ್ಶ ಯುವ ಪೀಳಿಗೆಗೆ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಬ್ರಹ್ಮಾವರದ ‘ಅಪ್ಪ ಅಮ್ಮ ಅನಾಥಾಲಯ’ದಲ್ಲಿ ನಡೆದ ‘ಭಾರತ ರತ್ನ’ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಅನಾಥಾಲಯಕ್ಕೆ ಬೇಕಾಗುವ ಆಹಾರ ಸಾಮಗ್ರಿಗಳು ಮತ್ತು ನಿತ್ಯೋಪಯೋಗಿ ವಸ್ತುಗಳನ್ನು ಹಸ್ತಾಂತರಿಸಲಾಯಿತು

ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ರುಡಾಲ್ಫ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಜೆ.ಬಿ., ಮೋರ್ಚಾ ಪ್ರಮುಖರಾದ ನವೀನ್ ಡಿಸೋಜ, ಅಂತೋನಿ ಡಿಸೋಜ ಹಾಗೂ ಮೋರ್ಚಾದ ಜಿಲ್ಲೆಯ ಪದಾಧಿಕಾರಿಗಳು, ಬೈಂದೂರು ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಸೆಲ್ ಡಿಸೋಜ ಸ್ವಾಗತಿಸಿದರು. ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೇಕ್ ಆಸಿಫ್ ಕಟಪಾಡಿ ವಂದಿಸಿದರು.

   

Related Articles

error: Content is protected !!