ನವದೆಹಲಿ : ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಈಗಾಗಲೇ ರಕ್ಷಣಾ ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ. ನಾನು ಕೇರಳ ಸಿಎಂ ಪಿಣರಾಯಿ ಅವರೊಂದಿಗೆ ಮಾತನಾಡಿದ್ದೇನೆ. ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ರು. ಪರಿಹಾರ ನೀಡುತ್ತೇವೆ. ಪರಿಸ್ಥಿತಿಯನ್ನು ಅವಲೋಕಿಸಿ ಕೇಂದ್ರದಿಂದ ಸಾಧ್ಯವಾದ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ