ಬ್ರಹ್ಮಾವರ ; ಬಡಗುತಿಟ್ಟು ಯಕ್ಷಗಾನ ಯುವ ಕಲಾವಿದ ಗುರುಪ್ರಸಾದ್ ಕುಲಾಲ್ (25ವರ್ಷ) ಎಂಬವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಾವಿದ ಗುರುಪ್ರಸಾದ್ ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಮಂದಾರ್ತಿ,ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು ಬಹುತೇಕ ಸ್ತ್ರೀ ಪಾತ್ರಗಳ ಮೂಲಕವೇ ಪ್ರಚಾರದಲ್ಲಿದ್ದರು. ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ತಾಯಿ, ತಮ್ಮ ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ