ಕೋಟ: ಇಲ್ಲಿನ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರು ದ್ಯಾವಸ ಹಾಗೂ ಗಿಳಿಯಾರು ಭಾಗಗಳ ನೆರೆ ಹಾನಿ ಪ್ರದೇಶಗಳಿಗೆ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ,ಕುಂದಾಪುರ ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ,ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್.ಎ.ಕುಂದರ್,ಸ್ಥಳೀಯ ಮುಖಂಡರಾದ ಗಣೇಶ್ ನೆಲ್ಲಿಬೆಟ್ಟು,ಚಂದ್ರಯ್ಯ ಆಚಾರ್,ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ,ಕೋಟ ಗ್ರಾಮಲೆಕ್ಕಿಗ ರಾಘವೇಂದ್ರ ಹಕ್ಲಾಡಿ,ಕೋಟ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.