ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಮುಡಾ ಮತ್ತು ವಾಲ್ಮೀಕಿ ಹಗರಣಗಳ ವಿರುದ್ಧ ನಡೆಸಬೇಕಾದ ಹೋರಾ ಟದ ಕುರಿತಾಗಿಯೂ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ.
ದೆಹಲಿಯ ಸಂಸತ್ ಭವನದ ಕಚೇರಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಬಿಜೆಪಿಯ ಕೆಲ ರಾಜ್ಯ ನಾಯಕರ ಅಸಹಕಾರ, ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೆ, ಕಾಂಗ್ರೆಸ್ ವಿರುದ್ದದ ಪಾದಯಾತ್ರೆ ವಿಚಾರದಲ್ಲಿ ಜೆಡಿಎಸ್ ನಾಯಕರ ಅಪಸ್ವರದ ಬಗ್ಗೆಯೂ ಚರ್ಚೆ ನಡೆಯಿತು. ಗೊಂದಲದ ಹಿನ್ನೆಲೆಯಲ್ಲಿ ಪಾದ ಯಾತ್ರೆ ಮುಂದುವರೆಸಬೇಕಾ?, ಬೇಡವಾ ? ಎಂದು ಅಮತ್ ಶಾರಿಂದ ಸಲಹೆ ಪಡೆದರು ಎಂದು ತಿಳಿದು ಬಂದಿದೆ