ಬೈಂದೂರು : ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಶ್ರೀ ಹೇಮಂತ್ ಇವರನ್ನು ಭೇಟಿ ಮಾಡಿ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗರಿಗೆ ರೂ 85.00ಕೋಟಿ ಮಂಜೂರಾಗಿದ್ದು, CRZ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಜೊತೆಗೆ ಗಂಗೊಳ್ಳಿ ಬಂದರು ಆಧುನಿಕರಣ, ಗಂಗೊಳ್ಳಿ ಕೋಸ್ಟಲ್ ಬರ್ತ್, ಕೊಡೇರಿ ಕಿರುಬಂದರು ಅಭಿವೃದ್ಧಿ, ಶಿರೂರು ಕಿರುಬಂದರು ಅಭಿವೃದ್ಧಿ , ಉಪ್ಪುಂದದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್ ವಾಟರ್ ಹಾಗೂ ಕಿರುಬಂದರು ನಿರ್ಮಾಣದ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರಿನ ವೆಂಕಟೇಶ್ ಕಿಣಿ, ಸಮೃದ್ಧ ಬೈಂದೂರು ನಿಯೋಗ ಹಾಗೂ ಸಂಸದರ ದೆಹಲಿ ಕಛೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಕೇಂದ್ರ ಬಂದರು ಇಲಾಖೆ ನಿರ್ದೇಶಕರು ಕೂಡಲೇ ಎಲ್ಲಾ ಯೋಜನೆಗಳನ್ನು ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ.