ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣದಲ್ಲಿ ನನ್ನ ಪಾತ್ರವಿಲ್ಲದಿದ್ದರೂ ರಾಜ್ಯಪಾಲರು ನನಗೆ ಶೋಕಾಸ್ ನೋಟಿಸ್ ನೀಡಿರುವುದು ಕಾನೂನು ಬಾಹಿರವಾಗಿದೆ. ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. ಇದಕ್ಕೆಲ್ಲ ನಾನು ಹೆದರಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ದರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. ನಾನು 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿಯಾಗಿದ್ದೇನೆ ಎಂದರು