ಕುಂದಾಪುರ : ಗಂಗೊಳ್ಳಿ-ಮುಳ್ಳಿಕಟ್ಟೆ ರಸ್ತೆಯಲ್ಲಿ ಗೂಡ್ಸ್ ವಾಹನದಲ್ಲಿ ಕಾನೂನು ಬಾಹಿರವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಕುಂದಾಪುರ ತಾಲೂಕು ಆಹಾರ ನಿರೀಕ್ಷಕ ಸುರೇಶ ಎಚ್.ಎಸ್ ಅವರು ವಶಪಡಿಸಿಕೊಂಡಿದ್ದಾರೆ ಅವರಿಗೆ ಬಂದ ಮಾಹಿತಿ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಯವರೊಂದಿಗೆ ಗಂಗೊಳ್ಳಿ-ಮುಳ್ಳಿಕಟ್ಟೆ ರಸ್ತೆಯಲ್ಲಿ ಗುಜ್ಜಾಡಿ ಗ್ರಾಮದ ಮಂಕಿ ಕ್ರಾಸ್ ಸಮೀಪ ನಾಯಕವಾಡಿ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನವನ್ನು ನಿಲ್ಲಿಸಿ ಪರಿಶೀಲಿಸಿದಾಗ ವಾಹನದಲ್ಲಿ 24 ಪಾಲಿತಿನ್ ಚೀಲಗಳಲ್ಲಿ ಕುಚಲಕ್ಕಿ ಹಾಗೂ 4 ಪಾಲಿತಿನ್ ಚೀಲಗಳಲ್ಲಿ ಬೆಳ್ತಿಗೆ ಅಕ್ಕಿ ಪತ್ತೆಯಾಗಿದೆ. ಸುಮಾರು 1,390 ಕೆ.ಜಿ. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನುಅಕ್ರಮವಾಗ ಸಾಗಾಟ ಮಾಡುತ್ತಿದ್ದು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.