ಕೋಟ : ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ವ್ಯವಸ್ಥೆಗೆ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಮುನ್ನುಡಿ ಬರೆಯುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಾಜೇಶ್ ಉಪಾಧ್ಯಾಯ ಹೇಳಿದರು. ಭಾನುವಾರ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರ ಪಾರಂಪಳ್ಳಿ ಪಡುಕರೆ ಇಲ್ಲಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಪಡುಕರೆ ಇವರ ನೇತೃತ್ವದಲ್ಲಿ ಹಾಗೂ ಭಾರತೀಯ ಅಂಚೆ ಇಲಾಖೆ ಇವರ ಸಹಯೋಗದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನ ಸಮಗ್ರ ರಕ್ಷಣೆ ಯೋಜನೆ ಅಪಘಾತ ವಿಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜನಸಾಮಾನ್ಯರ ಸಮಸ್ಯೆಗಳಿಗೆ ಸಂಘಸAಸ್ಥೆಗಳು ಸ್ಪಂದಿಸುವ ಕಾರ್ಯಕ್ರಮಗಳನ್ನು ಈ ಸಮಾಜಕ್ಕೆ ನೀಡಬೇಕು ಆ ಮೂಲಕ ಗ್ರಾಮದ ಅಭಿವೃದ್ಧಿಗೆ ಪ್ರೇರಕವಾಗಿರುತ್ತದೆ,ಅಂಚೆ ಸೇವೆಯ ಯೋಜನೆಗಳು ಅಗತ್ಯವಿರುವರಿಗೆ ತಲುಪುವಂತ್ತಾಗಲಿ ಈ ಮೂಲಕ ಸಮಾಜಕ್ಕೆ ಇನ್ನಷ್ಟು ಕಾರ್ಯಕ್ರಮಗಳು ನೀಡುವಂತ್ತಾಗಲಿ ಎಂದು ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗಿರೀಶ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರ ವಿಭಾಗ ಅಂಚೆ ಮೇಲ್ವಿಚಾರಕ ಮಹೇಂದ್ರ ಯು.ಎಸ್ ,ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯ ಪುನೀತ್ ಪೂಜಾರಿ ,ಖಾಸಗಿ ಹಿರಿಯ ಪಾರ್ಥಮಿಕ ಶಾಲೆ ಪಾರಂಪಳ್ಳಿ ಮುಖ್ಯ ಶಿಕ್ಷಕ ರಾಘವೇಂದ್ರ ಹೊಳ್ಳ, ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಸುಧಾಕರ ಪೂಜಾರಿ ,ಸಾಲಿಗ್ರಾಮ ಪೋಸ್ಟ್ ಆಫೀಸ್ರ್ ಶುಭ ಕೃಷ್ಣ ಶ್ರೀಯನ್, ಕೋಟ ಪೋಸ್ಟ್ ಮ್ಯಾನ್ ಮಹೇಶ್ ಬೆಳಗಾವಿ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಸ್ಪೋರ್ಟ್ಸ್ ಕ್ಲಬ್ನ ದೇವೇಂದ್ರ ಶ್ರೀಯಾನ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.