ಕುಂದಾಪುರ : ಮರವಂತೆಯ ಸೌಪರ್ಣಿಕ ನದಿ ತೀರದಲ್ಲಿ ವಿರಾಜಮಾನನಾಗಿರುವ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಈವರ್ಷವೂ ಅಮಾವಾಸ್ಯೆ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು
ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀವರಾಹ ಸ್ವಾಮಿ, ಶ್ರೀವಿಷ್ಣು ಶ್ರೀ ನರಸಿಂಹ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ, ಮಂಗಳಾರತಿ ಮತ್ತು ಹಣ್ಣು ಕಾಯಿ ಸೇವೆ ನೆರವೇರಿಸಲಾಯಿತು. ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಪಂಚಕಜ್ಜಾಯ, ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು
. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ.ನಾಯಕ್ ಮತ್ತು ಸದಸ್ಯರು, ದೇವಳದ ಅರ್ಚಕರು, ಸಿಬ್ಬಂದಿ, ಊರ ಪರವೂರ ಭಕ್ತರು ಉಪಸ್ಥಿತರಿದ್ದರು. ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ವಿಶೇಷ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಯಿತು.