ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿಯೇ ಯಶಸ್ವಿಯಾಗಿ ಎದುರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸನ್ನು ಹಿಂತೆಗೆದುಕೊಳ್ಳಬೇಕು. ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ ಎಂದು ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್‌ನವರು ರಾಜಕೀಯ ಕಾರಣಕ್ಕಾಗಿ ನನ್ನ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಗಟ್ಟಿ ಧ್ವನಿಯಲ್ಲಿಯೇ ನಾನು ಕೂಡ ಬಿಜೆಪಿ-ಜೆಡಿಎಸ್ ವಿರುದ್ಧ ಹೋರಾಡುವೆ ಎಂದರು.