ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಬಸ್ಸನ್ನೇ ಅತ್ಯಂತ ವೇಗವಾಗಿ ಹಾರ್ನ್ ಬಾರಿಸಿಕೊಂಡು ಆಸ್ಪತ್ರೆಗೆ ಕೊಂಡೊಯ್ದ ಘಟನೆ ಮಂಗಳೂರಿನಲ್ಲಿ ನಡೆದು ವಾರದೊಳಗೆ ಇಂತದ್ದೇ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಯುವತಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದ ಘಟನೆ ಉಡುಪಿಯಲ್ಲಿ ನಡೆದಿದೆ
ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಬಸ್ ಉಡುಪಿಯ ಹಳೆ ತಾಲೂಕು ಕಚೇರಿ ಬಳಿ ಬರುವಾಗ ಯುವತಿಯೋರ್ವಳು ಅಸ್ವಸ್ಥಳಾಗಿ ಬಸ್ಸಿನಲ್ಲೇ ವಾಂತಿ ಮಾಡಿಕೊಂಡು ಪ್ರಜ್ಞಾಹೀನ ಸ್ಥಿತಿ ತಲುಪಿದ್ದು, ಕೂಡಲೇ ಬಸ್ಸಿನ ಚಾಲಕ ಶಶಿಕಾಂತ್ ಬಸ್ಸನ್ನು ಪಕ್ಕದ ಟಿಎಮ್ಎ ಪೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದತ್ತ ಕೊಂಡೊಯ್ದಿದ್ದು, ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ
ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಯ ಚಿಕಿತ್ಸೆಗೆ ಸಹಕಾರ ನೀಡುವ ಮೂಲಕ ಮಾನವೀಯತೆ ಮೆರೆದ ಬಸ್ಸಿನ ಚಾಲಕ ಶಶಿಕಾಂತ್ ಹಾಗೂ ನಿರ್ವಾಹಕ ಸಲೀಂ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ