Home » ಉಡುಪಿ ಜಿಲ್ಲಾ ಬಿಜೆಪಿ ಸಂತಾಪ
 

ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

ಪತ್ರಕರ್ತ ಜಯಕರ ವಿ. ಸುವರ್ಣ ನಿಧನ

by Kundapur Xpress
Spread the love

ಉಡುಪಿ : ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ವಿ. ಸುವರ್ಣ ಅವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿರುವ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಸ್ನೇಹ ಜೀವಿ ಜಯಕರ ಸುವರ್ಣ ಅವರ ಅಗಲುವಿಕೆ ಮಾಧ್ಯಮ ರಂಗಕ್ಕೆ ತುಂಬಲಾರದ ನಷ್ಟವೆನಿಸಿದೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   

Related Articles

error: Content is protected !!