ಬೆಂಗಳೂರು : ಮುಡಾ ಹಗರಣ ವಿಚಾರದಲ್ಲಿ ರಾಜಭವನ ಈಗ ಚಟುವಟಿಕೆಗಳ ಕೇಂದ್ರ ಬಿಂದುವಾಗಿದ್ದು ಮುಡಾ ಹಗರಣಕ್ಕೆ ಸಂಬಂಧಿಸಿ ಸಿ ಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮಂಗಳವಾರ ಮತ್ತೊಂದು ದೂರು ನೀಡಲಾಗಿದೆ. ಮುಖ್ಯಮಂತ್ರಿಗಳ ವಿಚಾರದಲ್ಲಿ ರಾಜ್ಯಪಾಲರು ಇಡುವ ಪ್ರತಿಯೊಂದು ಹೆಜ್ಜೆಯೂ ಈಗ ಕುತೂಹಲ ಕೆರಳಿಸುತ್ತಿದ್ದು, ಎಲ್ಲರ ದೃಷ್ಟಿ ರಾಜಭವನದತ್ತ ನೆಟ್ಟದೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ. ಬಿ. ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ಮತ್ತೊಂದು ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ‘1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂ ಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು ಎಂದು ಆರೋಪಿಸಲಾಗಿದೆ