Home » ಪೂರಕ ದಾಖಲೆ ಒದಗಿಸಿದ ಸಿದ್ದರಾಮಯ್ಯ
 

ಪೂರಕ ದಾಖಲೆ ಒದಗಿಸಿದ ಸಿದ್ದರಾಮಯ್ಯ

ಮೂಡಾ ನಿವೇಶನ ಹಂಚಿಕೆ ಹಗರಣ

by Kundapur Xpress
Spread the love

ಬೆಂಗಳೂರು : ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿ ರಾಜ್ಯ ಪಾಲರು ನೀಡಿರುವ ಶೋಕಾಸ್ ನೋಟಿಸ್‌ಗೆ ಸಿದ್ದರಾಮಯ್ಯ ಉತ್ತರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ನೀಡಿದ್ದಾರೆ. ಪ್ರತ್ಯೇಕವಾಗಿ, ವೈಯಕ್ತಿಕವಾಗಿ ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ನೀಡಿದ್ದಾರೆ. ವಿವರಣೆ ಅಲ್ಲದೆ, ರಾಜ್ಯಪಾಲರು ನೋಟಿಸ್‌ನಲ್ಲಿ ಉಲ್ಲೇಖಿಸಿರುವ ಆರೋಪಗಳನ್ನು ಸಿಎಂ ನಿರಾಕ ರಿಸಿದ್ದಾರೆ. ಆದರೆ, ಇದು ರಾಜ್ಯಪಾಲರ ನೋಟಿಸ್‌ಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯವನ್ನು ಒಳಗೊಂಡಿಲ್ಲ ಎನ್ನಲಾಗಿದೆ. ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪ್ರಭಾವವನ್ನೂ ಬಳಸಿಲ್ಲ. ಕಾನೂನಾತ್ಮಕವಾಗಿಯೇ ಪತ್ನಿಗೆ ಸೈಟ್ ಹಂಚಿಕೆಯಾಗಿದೆ ಎಂದಿರುವ ಸಿದ್ದರಾಮಯ್ಯ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಉತ್ತರದ ಜತೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

   

Related Articles

error: Content is protected !!