ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಅರ್ಹ, ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.22 ಕೊನೆಯ ದಿನ. ಮಾಹಿತಿ ಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗ ಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿ ಗಳ ಸಂಕೀರ್ಣ, ರಜತಾದ್ರಿ, ಬಿ.ಬ್ಲಾಕ್, ಕೊಠಡಿ ಸಂಖ್ಯೆ:304, 2ನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881,2573881 . ಸಂಪರ್ಕಿಸಬಹುದು.