ಹೊಸದಿಲ್ಲಿ: ಬ್ಯಾಂಕ್ ಚೆಕ್ಗಳ ನಗದೀಕರಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ), ಇನ್ನು ಮುಂದೆ ಕೆಲವೇ ಗಂಟೆಗಳಲ್ಲಿ ಚೆಕ್ಗಳನ್ನು ನಗದೀಕರಣಗೊಳಿಸಲಾಗುವುದು ಎಂದು ಘೋಷಿಸಿದೆ. ಗುರುವಾರ ಹಣಕಾಸು ನೀತಿ ಸಮಿತಿಯ (ಎಂಪಿಸಿ) ನಿರ್ಧಾರಗಳನ್ನು ಪ್ರಕಟಿಸಿದ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್, ಪ್ರಸ್ತುತ ಚೆಕ್ ನಗದೀಕರಣ ಎರಡು ಕೆಲಸದ ದಿನಗಳನ್ನು ತೆಗೆದುಕೊಳ್ಳುತ್ತದೆ. ನಿರಂತರ ನಗದೀಕರಣವನ್ನು ಪರಿಚಯಿಸುವ ಮೂಲಕ ಈ ಸಮಯವನ್ನು ಕಡಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.