Home » ಇಂದು ಮೈಸೂರಿನಲ್ಲಿ ಬೃಹತ್‌ ಸಮಾವೇಶ
 

ಇಂದು ಮೈಸೂರಿನಲ್ಲಿ ಬೃಹತ್‌ ಸಮಾವೇಶ

ಬಿಜೆಪಿ -‌ ಜೆಡಿಎಸ್

by Kundapur Xpress
Spread the love

ಮೈಸೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾ ಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ -ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಕೈ ಗೊಂಡಿರುವ ಪಾದಯಾತ್ರೆ ನಿರೀಕ್ಷೆಯಂತೆ ಏಳನೆಯ ದಿನ ಮೈಸೂರು ತಲುಪಿದೆ.

ಪಾದಯಾತ್ರೆಯ ಸಮಾರೋಪದ ಭಾಗವಾಗಿ ಶನಿವಾರ, ನಗರದ ಮಹಾ ರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ.ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯನ್ನು ಬಿಜೆಪಿ ಮುಖಂಡರು ಹೊಂದಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರೂರಲ್ಲಿ ನಡೆಯಲಿರುವ ಈ ಸಮಾ ವೇಶದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಖಂಡರು ತೀವ್ರ ವಾಗ್ದಾಳಿ ನಡೆಸುವ ನಿರೀಕ್ಷೆ ಇದೆ. ಮುಡಾ ಮತ್ತು ವಾಲ್ಮೀಕಿ ನಿಗಮ ಹಗರಣದ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟಗಳ ಕುರಿತು ಇದೇ ವೇದಿಕೆಯಲ್ಲಿ ಘೋಷಣೆ ಮಾಡುವ ನಿರೀಕ್ಷೆ ಕೂಡ ಇದೆ.

128 ಕಿ.ಮೀ. ಪಾದಯಾತ್ರೆ:

ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಪರಿಶಿಷ್ಟರಿಗೆ ಮೀಸಲಾದ ಅನುದಾನ ದುರ್ಬಳಕೆ ವಿಚಾರವಾಗಿ ಕಳೆದ ಶನಿವಾರ ಬೆಂಗಳೂರಿನ ಕೆಂಗೇರಿಯಿಂದ ಆರಂಭವಾದ ಈ128ಕಿ.ಮೀ.ಪಾದಯಾತ್ರೆ ರಾಮನಗರ, ಮಂಡ್ಯದ ಮೂಲಕ ಸಾಗಿ ಶುಕ್ರವಾರ ರಾತ್ರಿ 8 ಗಂಟೆಗೆ ಮೈಸೂರು ಪ್ರವೇಶಿಸಿದೆ. ಕಾಂಗ್ರೆಸ್ ಜನಾಂದೋಲನ ಸಮಾವೇಶ ನಡೆದ ಮಹಾರಾಜ ಕಾಲೇಜು ಮೈದಾನದಲ್ಲೇ ಶನಿವಾರ ಬೆಳಗ್ಗೆ 11.00 ಗಂಟೆಗೆ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪವೂ ನಡೆಯಲಿದೆ

   

Related Articles

error: Content is protected !!