ಮೈಸೂರು : ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಅಧಿವೇಶನದಲ್ಲಿ ಉತ್ತರ ನೀಡದೆ ಓಡಿ ಹೋದ ರಣಹೇಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ರಾಜ್ಯಾಧ್ಯಕ್ಷ ಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಅಕ್ರಮವನ್ನು ಪ್ರಶ್ನೆ ಮಾಡದೆ ವಿಪಕ್ಷಗಳು ಚಮಚಾಗಿರಿ ಮಾಡಿಕೊಂಡು ಇರಬೇಕಾ? ಮುಖ್ಯಮಂತ್ರಿಗೆ ಬಹುಪ ರಾಕ್ ಹೇಳಬೇಕಾ? ಎಂದು ಪ್ರಶ್ನಿಸಿದರು.
ಬಿಜೆಪಿ-ಜೆಡಿಎಸ್ ಹೋರಾಟವನ್ನು ಸಿದ್ದರಾ ಮಯ್ಯ ವಿರುದ್ಧ ನಡೆಸುತ್ತಿಲ್ಲ. ಇದು ಭ್ರಷ್ಟ ಮುಖ್ಯಮಂತ್ರಿಗಳ ವಿರುದ್ಧ ನಡೆಸುತ್ತಿರುವ ಹೋರಾಟವಾಗಿದೆ. ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹೊಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾ ಟವಾಗಿದೆ. ಪಾದಯಾತ್ರೆ ಮುಕ್ತಾಯಗೊಳಿಸುವ ಮೂಲಕ ಹೋರಾಟ ನಿಲ್ಲಿಸುವುದಿಲ್ಲ. ಹೋರಾಟ ನಿರಂತರವಾಗಿರಲಿದ್ದು, ನಮ್ಮ ಹೋರಾಟವನ್ನು ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯುವವರೆಗೆ ಹೋರಾಟ ಮುಂದುವರೆಯಲಿದೆ ಎಂದರು.