ಹೊಸದಿಲ್ಲಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರೂ ಆಗಿರುವ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ನಿಧಿಯನ್ನು ಉತ್ತರ ಕರ್ನಾಟಕದ ಹಿಂದುಳಿದ ಬೀದರ್ ಜಿಲ್ಲೆಯಲ್ಲಿ ವಿನೂತನ ರೀತಿಯಲ್ಲಿ ವಿನಿಯೋಗಿಸಿ ಕ್ಷೀರ ಕ್ರಾಂತಿಯೊಂದಕ್ಕೆ ನಾಂದಿ ಹಾಡಿರುವುದನ್ನು ಸಂಸದರ ನಿಧಿಯ ಮಾದರಿ ಸದ್ವಿನಿಯೋಗ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನೂ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು