ಕುಂದಾಪುರ : ನಮ್ಮ ಭಾಷೆ, ನಂಬಿಕೆ, ಆಚಾರ-ವಿಚಾರ, ಜೀವನ ವಿಧಾನವೇ ಸಂಸ್ಕೃತಿ, ಬದುಕಿನ ಆಂತರಿಕ ಸಂಗತಿಯೇ ಸಂಸ್ಕೃತಿಯಾಗಿದೆ. ಅವುಗಳು ಅಸ್ಮಿತೆಯಾಗಿ ಉಳಿದಾಗ ಮಾತ್ರ ನಮ್ಮತನ ಉಳಿಯುತ್ತದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ. ರೇಖಾ ವಿ. ಬನ್ನಾಡಿ ಹೇಳಿದರು.
ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ನಮ್ಮ ಸಂಸ್ಕೃತಿ”ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕನ್ನಡ ಪ್ರಾಧ್ಯಾಪಕಿ ಶ್ರೀಮತಿ ಪ್ರವೀಣಾ ಮಹಾಬಲ ಪೂಜಾರಿ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀಮತಿ ಸ್ವಾತಿ ಜಿ. ರಾವ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.