ಕೋಟ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಜ್ಞಾನ ಬಲವರ್ಧನೆಗೆ ಕ್ರೀಡೆ ಸಹಕಾರಿ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನ ಅಂಜುಮ್ ಹೇಳಿದರು
ಸೋಮವಾರ ಕೋಡಿ ಕನ್ಯಾಣದ ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಇಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಚೆಸ್ ಪಂದ್ಯಾಟಗಳು ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ ಅದೊಂದು ಕ್ರೀಡೆಯಾಗಿಯೇ ಉಳಿಯದೆ ಬೌತಿಕ ಬೆಳವಣಿಗೆಗೆ ಪ್ರೇರಕ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರಲ್ಲದೆ ಪಂದ್ಯಾಟದಲ್ಲಿ ಸೋಲು ಗೆಲುವು ಸಾಮಾನ್ಯ ಧೃತಿಗೆಡದೆ ಮುಂದಿನ ದಿನಗಳಲ್ಲಿ ಪಂದ್ಯಾಟದಲ್ಲಿ ತೊಡಗಿಸಿಕೊಳ್ಳುವಂತೆ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ರಾಜ್ಯ ಹಂತದ ಪಂದ್ಯಾಟಕ್ಕೆ ಶುಭ ಹಾರೈಸಿದರು
ಬ್ರಹ್ಮಾವರ ತಾಲೂಕಿನ ಕ್ರೀಡಾ ಪರಿವೀಕ್ಷಣಾಧಿಕಾರಿ ಪದ್ಮಾವತಿ ಹಾಗೂ ಬಿ ಆರ್ ಸಿ ಕೋ ಆರ್ಡಿನೇಟರ್ ಅರ್ಚನಾ ಹೆಗ್ಡೆ ಇವರು ಜಂಟಿಯಾಗಿ ದಾಳವನ್ನು ನಡೆಸುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಜಯಲಕ್ಷಿ÷್ಮ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಖಾರ್ವಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾದ ಚಂದ್ರಶೇಖರ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಬ್ರಹ್ಮಾವರ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ ಹೆಗ್ಡೆ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ ,ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಉಮಾನಾಥ್, ಚೆಸ್ ಪಂದ್ಯಾಟದ ಪ್ರಧಾನ ತೀರ್ಪುಗಾರರಾದ ಬಾಬು ಪೂಜಾರಿ,ಕೋಡಿಕನ್ಯಾನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ ಅಡಿಗ,ಶಿಕ್ಷಣ ಅಭಿಮಾನಿ ಮಹಾಬಲ ಕುಂದರ್,ಕೋಡಿ ಪಂಚಾಯತ್ ಸದಸ್ಯರಾದ ಪ್ರಭಾಕರ ಮೆಂಡನ್ ಉಪಸ್ಥಿತರಿದ್ದರು.
ಪ್ರೌಢ ಶಾಲೆಯ ಹಿರಿಯ ಸಹ ಶಿಕ್ಷಕಿ ರಾಧಿಕಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಶೆಟ್ಟಿ.ಬಿ ವಂದಿಸಿದರು.
ಸಹ ಶಿಕ್ಷಕಿ ಜ್ಯೋತಿ ಕೃಷ್ಣ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.