Home » ಸಿಬಿಐ ತನಿಖೆಗೆ ಹೈಕೋರ್ಟ್‌ಗೆ ಅರ್ಜಿ
 

ಸಿಬಿಐ ತನಿಖೆಗೆ ಹೈಕೋರ್ಟ್‌ಗೆ ಅರ್ಜಿ

ವಾಲ್ಮೀಕಿ, ಮುಡಾ ಸೇರಿ ₹50,000 ಕೋಟಿ ಅಕ್ರಮ

by Kundapur Xpress
Spread the love

ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ನಡೆದಿದೆ ಎನ್ನಲಾಗಿರುವ ಅಂದಾಜು 50 ಸಾವಿರ ಕೋಟಿ ಮೊತ್ತದ ಅವ್ಯವಹಾರ ಪ್ರಕರಣಗಳ ಕುರಿತು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಮೈಸೂರಿನ ಕೆ.ಆರ್.ನಗರದ ವಕೀಲ ಸಿ.ಸಂತೋಷ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. 2015ರಲ್ಲಿ ನೀರಾವರಿ ಯೋಜನೆಯ 40 ಕೋಟಿ ರು. 2019ರಿಂದ 23ರ ಅವಧಿಯಲ್ಲಿ ಕಿಯೋನಿಕ್ಸ್ ನಲ್ಲಿ 500 ಕೋಟಿ ರು, ಕೋವಿಡ್-1940 ಸಾವಿರ ಕೋಟಿ ರು. ಪಿಎಸ್‌ಐ ನೇಮಕಾತಿಯಲ್ಲಿ 100 ಕೋಟಿ ರು. ಶೇ.40 ಕಮಿಷನ್‌ನಿಂದ 2 ಸಾವಿರ ಕೋಟಿ ರು. ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂದು ತಿಳಿಸಲಾಗಿದೆ.

   

Related Articles

error: Content is protected !!