ಕುಂದಾಪುರ: 1947 ಆಗಸ್ಟ್ 15 ಎನ್ನುವುದು ಭಾರತೀಯರ ಪಾಲಿಗೆ ಮಹತ್ತರವಾದ ದಿನ. ಬ್ರಿಟಿಷರ ದಾಸ್ಯ ಸಂಕೋಲೆಯಿಂದ ನಾವೆಲ್ಲರೂ ಬಿಡುಗಡೆ ಹೊಂದಿದ ದಿವಸ ಆ ಪ್ರಯುಕ್ತ ಅದರ ಸವಿನೆನಪಿಗಾಗಿ ಎಕ್ಸಲೆಂಟ್ ಕ್ಯಾಂಪಸ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಎಂ ಎಂ ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ.) ಕುಂದಾಪುರ. ಇದರ ಅಧ್ಯಕ್ಷರಾದ ಶ್ರೀ ಎಂ ಮಹೇಶ್ ಹೆಗ್ಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಧ್ವಜಾರೋಹಣವನ್ನು ವಿದ್ಯಾರ್ಥಿಗಳ ವಂದೇ ಮಾತರಂ, ರಾಷ್ಟ್ರಗೀತೆ, ಧ್ವಜ ಗೀತೆಗಳೊಂದಿಗೆ ಈ ಭಾವೈಕ್ಯತೆಯ ರಾಷ್ಟ್ರೀಯ ಹಬ್ಬವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ನೆನಪಿಸಿಕೊಂಡು ಅವರ ತ್ಯಾಗ ಬಲಿದಾನವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಸ್ವಾತಂತ್ರ್ಯದ ಮಹತ್ವದ ಜೊತೆಗೆ ನಮ್ಮ ಜವಾಬ್ದಾರಿಗಳೇನು ಎಂಬುದನ್ನು ಅರ್ಥ ಮಾಡಿಕೊಂಡು ದೇಶಕ್ಕೆ ನಾವು ಸಹ ಏನಾದರೂ ಕೊಡುಗೆ ನೀಡಬೇಕಾಗಿದೆ ಎಂಬ ಕರೆಯನ್ನು ನೀಡಿದರು